ಚಂಡೀಗಡ: ಕೆಎಂಪಿ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯಲ್ಲಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಕಂದಮ್ಮ ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್ಗಢ್ನಲ್ಲಿ ನಡೆದಿದೆ.
ಒಟ್ಟು 11 ಜನರಿದ್ದ ಕಾರು ಉತ್ತರ ಪ್ರದೇಶದ ಕಡೆಗೆ ಪ್ರಯಾಣ ಬೆಳೆಸಿತ್ತು. ಆದರೆ ಬಹದ್ದೂರ್ಗಢ್ನಲ್ಲಿ ಕಾರು ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಕಾರಿನಲ್ಲಿದ್ದ 8 ಮಂದಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮತ್ತೊಂದು ಮಗು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರ ಗುರುತು ಪತ್ತೆ ಹಚ್ಚಲಾಗಿಲ್ಲ. ಸ್ಥಳಕ್ಕೆ ಬಹದ್ದೂರ್ಗಢ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
22/10/2021 12:35 pm