ಬಾಗಲಕೋಟೆ: ಚಾಲಕ ನಿಯಂತ್ರಣ ತಪ್ಪಿದ ಕಾರು ಘಟಪ್ರಭಾ ಕಾಲುವೆಗೆ ಬಿದ್ದು 4 ಜನ ಸಾವನ್ನಪ್ಪಿದ, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.
ಬೆಳಗಾವಿಯ ರಾಮದುರ್ಗದ ಮೂಲದ ಮಹಾದೇವಗೌಡ (27), ಎರಿತಾತಾ (26), ವಿಜಯ್ (26), ಸುನೀಲ (24) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲ ಗೆಳೆಯರೊಂದಿಗೆ ಪಾರ್ಟಿ ಮಾಡಲೆಂದು ಮುಧೋಳಕ್ಕೆ ತೆರಳಿದ್ದರು. ಪಾರ್ಟಿ ಮುಗಿಸಿ ಮದ್ಯದ ನಶೆಯಲ್ಲಿ ರಾತ್ರಿ 2 ಗಂಟೆ ಸುಮಾರಿಗೆ ವಾಪಸ್ ಬರುವಾಗ ಅವಘಡ ಸಂಭವಿಸಿದೆ. ಕ್ರೇನ್ ಸಹಾಯದಿಂದ ಕಾರು ಸಹಿತ ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ಲೋಕಾಪೂರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
22/10/2021 01:30 pm