ಬೆಂಗಳೂರು: ಮದುವೆ ಮುಗಿಸಿ ವಾಪಸ್ ಬರುತ್ತಿದ್ದ ಬಸ್‌ವೊಂದು ಕಂದಕ್ಕೆ ಬಿದ್ದು ಇಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಘಾಟಿ ದೇವಾಲಯದಲ್ಲಿ ಮದುವೆ ಹೋಗಿ ಹಿಂದಿರುಗುತ್ತಿದ್ದಾಗ ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರು ರಸ್ತೆಯ ನಡುವಿನ ಮಾಕಳಿ ಬೆಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿದೆ. ಪರಿಣಾಮ ಹಳ್ಳಕ್ಕೆ ಉರುಳಿ ಬಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗೌರಿಬಿದನೂರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಒಬ್ಬರು ಸಾವನ್ನಪ್ಪಿದ್ದು, ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮತ್ತೊಬ್ಬರು ಕೊನೆಯುಸಿರೆಳೆದಿದ್ದಾರೆ.
ಉಳಿದಂತೆ ಇತರೆ ಗಾಯಾಳುಗಳನ್ನು ಗೌರಿಬಿದನೂರು ಮತ್ತು ದೊಡ್ಡಬಳ್ಳಾಪುರ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ರಾತ್ರಿ ವೇಳೆ ಬಸ್ ಓಡಿಸುವಾಗ ರಸ್ತೆಯ ತಿರುವು ಕಾಣದೆ ಬಸ್ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.
PublicNext
24/10/2021 09:26 am