ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಗುಂಬೆ ಘಾಟಿಯಲ್ಲಿ ಪ್ರಪಾತಕ್ಕೆ ಬಿದ್ದ ಲಾರಿ, ನಾಲ್ಕು ಮಂದಿ ಸಾವು!

ಉಡುಪಿ/ಶಿವಮೊಗ್ಗ: ಆಗುಂಬೆ ಘಾಟ್‌ನಲ್ಲಿ ಲಾರಿಯೊಂದು ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ನಾಲ್ಕು ಮಂದಿ ಸಾವುನ್ನಪ್ಪಿದ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ 9ನೇ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆ ಆಗುವ ಭೀತಿ ಉಂಟಾಗಿದೆ.

ಸದ್ಯ ಸ್ಥಳಕ್ಕೆ ಆಗುಂಬೆ ಹಾಗೂ ಹೆಬ್ರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮೇಲಕ್ಕೆತ್ತಲು ಸ್ಥಳೀಯರು ಹಾಗೂ ಪೊಲೀಸರು ಹರಸಾಹಸ ಪಡುತ್ತಿದ್ದಾರೆ ಎನ್ನಲಾಗುತ್ತಿದೆ.

Edited By : Vijay Kumar
PublicNext

PublicNext

29/10/2021 04:17 pm

Cinque Terre

48.13 K

Cinque Terre

0

ಸಂಬಂಧಿತ ಸುದ್ದಿ