ಭೋಪಾಲ್: ಮಧ್ಯಪ್ರದೇಶದ ಸರ್ಕಾರಿ ಸ್ವಾಮ್ಯದ ಕಮಲಾ ನೆಹರು ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಪರಿಣಾಮ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಮಕ್ಕಳು ಮೃತಪಟ್ಟಿವೆ. ಘಟನೆ ನಡೆದಾಗ ಸುಮಾರು 50 ಮಕ್ಕಳು ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಡೆಯುತ್ತಿದ್ದರು ಎಂಬ ಮಾಹಿತಿ ಇದೆ.
ನ.08 ರ ಸೋಮವಾರ ರಾತ್ರಿ ಈ ಘಟನೆ ನಡೆದಿದೆ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ಮಾತನಾಡಿದ್ದು, ಘಟನೆಯನ್ನು ದುರದೃಷ್ಟಕರ ಎಂದು ಹೇಳಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಹಾಗೂ ರಕ್ಷಣಾ ಕಾರ್ಯಾಚರಣೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ.
ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ. ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಬೆಂಕಿಯ ಕೆನ್ನಾಲಿಗೆ ತಹಬದಿಗೆ ಬಂದಿದೆ ಎಂದು ಚೌಹಾಣ್ ಟ್ವೀಟ್ ಮಾಡಿದ್ದಾರೆ.
PublicNext
09/11/2021 08:04 am