ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಯಚೂರು: ಟೈರ್ ಸ್ಫೋಟಗೊಂಡು ಕೂಲಿ ಕಾರ್ಮಿಕರಿದ್ದ ಕ್ರೂಸರ್ ಪಲ್ಟಿ- ಮಹಿಳೆ ಸಾವು

ರಾಯಚೂರು: ಟೈರ್ ಸ್ಫೋಟಗೊಂಡು ಕ್ರೂಸರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡ ಭೀಕರ ಮೃತಪಟ್ಟ ಘಟನೆ ಜಿಲ್ಲೆಯ ಮಾನ್ವಿ ತಾಲೂಕಿನ ಬೊಮ್ಮನಾಳ ಕ್ರಾಸ್ ಬಳಿ ನಡೆದಿದೆ.

ಕೊಪ್ಪಳದ ಗಿಣಿಗೇರಾ ಮೂಲದ ಲಕ್ಷ್ಮೀದೇವಿ (45) ಮೃತ ಮಹಿಳೆ. ಹತ್ತಿ ಬಿಡಿಸಲು ಕೂಲಿ ಕಾರ್ಮಿಕರನ್ನು ಕ್ರೂಸರ್‌ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕ್ರೂಸರ್ ಟೈರ್ ಬ್ಲಾಸ್ಟ್ ಆಗಿದ್ದು ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಟೈರ್ ಸ್ಫೋಟದ ರಭಸಕ್ಕೆ ವಾಹನ ಪಲ್ಟಿ ಹೊಡೆದು ಉಲ್ಟಾ ಬಿದ್ದಿದ್ದರಿಂದ ಓರ್ವ ಮಹಿಳೆ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Edited By : Vijay Kumar
PublicNext

PublicNext

16/11/2021 10:41 am

Cinque Terre

54.02 K

Cinque Terre

0

ಸಂಬಂಧಿತ ಸುದ್ದಿ