ರಾಂಚಿ: ಗಂಟೆಗೆ 200 ಕಿ.ಮೀ ವೇಗವಾಗಿ ಚಲಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರುವೊಂದು ಚಾಲಕ ನಿಯಂತ್ರಣ ತಪ್ಪಿ ಸೇತುವೆಯಿಂದ ಸುಮಾರು 100 ಅಡಿ ಕೆಳಗೆ ಬಿದ್ದ ಪರಿಣಾಮ ಮಗು, ಇಬ್ಬರು ಮಹಿಳೆಯರು ಸೇರಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಭೀಕರ ಘಟನೆ ಜಾರ್ಖಂಡ್‌ನ ಧನ್ಬಾದ್ನಲ್ಲಿ ನಡೆದಿದೆ.
ಈ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳೀಯ ಗೋವಿಂದಪುರ ಪೊಲೀಸ್ ಠಾಣೆಯ ಪ್ರಭಾರಿ ತಂಡವು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಬಳಿಕ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ. ಈ ಸಂಬಂಧ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
PublicNext
23/11/2021 10:28 am