ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಟಾಲಿವುಡ್ ಸಿಂಗರ್ ತಂದೆ ರೈಲ್ವೇ ಟ್ರ್ಯಾಕ್ ಬಳಿ ಅನುಮಾನಸ್ಪಾದವಾಗಿ ಸಾವು: ಪೊಲೀಸರಿಂದ ತನಿಖೆ.

ಬೆಂಗಳೂರು: ತೆಲುಗು ಚಿತ್ರರಂಗದಲ್ಲಿ ಗಾಯಕಿಯಾಗಿ ಗುರುತಿಸಿಕೊಂಡಿದ್ದ ಹರಿಣಿ ಅವರ ತಂದೆ ಬೆಂಗಳೂರಿನಲ್ಲಿ ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದಾರೆ. ಯಲಹಂಕ ಹಾಗೂ ರಾಜಾನುಕುಂಟೆ ರೈಲ್ವೇ ಟ್ರ್ಯಾಕ್ ನಲ್ಲಿ ಚಾಕುವಿನಿಂದ‌ ಕೈ ಹಾಗೂ ಕತ್ತಿ ಚುಚ್ಚಿಕೊಂಡು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿರುವುದು ತಡವಾಗಿ ಬೆಳಕಿಗೆ ಬಂದಿದೆ‌.

ತೆಲಂಗಾಣ ಮೂಲದ ಎ.ಕೆ.ರಾವ್ ಹಲವು ದಿನಗಳಿಂದ ಕಣ್ಮರೆಯಾಗಿದ್ದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ನೀಡಿದ್ದರು. ಕೆಲ‌ ದಿನಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ರಾವ್ ಖಾಸಗಿ ಹೊಟೇಲ್ ನಲ್ಲಿ ಉಳಿದುಕೊಂಡಿದ್ದರು. ವಂಚನೆ ಸಂಬಂಧ ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣೆ ರಾವ್ ವಿರುದ್ದ ಪ್ರಕರಣ ದಾಖಲಾಗಿದೆ‌ ಎಂಬ ಮಾಹಿತಿ ಲಭ್ಯವಾಗಿದೆ‌.

ಕಳೆದ 22ರಂದು ರಾತ್ರಿ ಯಲಹಂಕ- ರಾಜಾನುಕುಂಟೆ ರೈಲ್ವೇ ಹಳಿ ಮಧ್ಯೆ ಚಾಕುವಿನಿಂದ ಚುಚ್ಚಿಕೊಂಡಿರುವ ಸಾವನ್ನಪ್ಪಿರುವ ಸ್ಥಿತಿಯಲ್ಲಿ ಶವ ಪತ್ತೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ್ದ ಬೆಂಗಳೂರು ನಗರ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌.

ಘಟನೆ ಸಂಬಂಧ ಮರಣೋತ್ತರ ಪರೀಕ್ಷೆ ನಡೆಸಿರುವ ವೈದ್ಯರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ‌. ವಿಷಯ ತಿಳಿಯುತ್ತಿದ್ದಂತೆ ರಾವ್ ಕುಟುಂಬಸ್ಥರು ಪರಿಶೀಲಿಸಿ ರಾವ್ ಅವರ ಸಹಜ ಸಾವಲ್ಲ.ಇದೊಂದು ಕೊಲೆ ಎಂದು ಪೊಲೀಸರಿಗೆ ದೂರು ನೀಡಿದ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Edited By : Nirmala Aralikatti
PublicNext

PublicNext

25/11/2021 12:45 pm

Cinque Terre

38.05 K

Cinque Terre

0