ವಿಜಯನಗರ: ಕಾರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಮೂಲತಃ ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡಾದ ನಿವಾಸಿ ಹನುಮಂತ (58) ಮೃತ ದುರ್ದೈವಿ. ಹನುಮಂತ ಬೈಕ್‌ನಲ್ಲಿ ಕೂಡ್ಲಿಗಿಯ ತಮ್ಮ ಸಂಬಂಧಿಕರ ಮನೆಗೆ ಹೋಗಿ ವಾಪಸ್ ಬರುತ್ತಿದ್ದರು. ಕೂಡ್ಲಿಗಿ ಪಟ್ಟಣದ ಹೊರವಲಯದಲ್ಲಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಬೈಕ್ ಸವಾರನಿಗೆ ಗುದ್ದಿದೆ. ಪರಿಣಾಮ ಬೈಕ್ ಸವಾರ ಹನುಮಂತ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಹನುಮಂತ ಮೃತಪಟ್ಟಿದ್ದಾರೆ. ಈ ಸಂಬಂಧ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
28/11/2021 07:55 am