ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ- ಯುವಕರಿಬ್ಬರು ಸಾವು

ದಾವಣಗೆರೆ: ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಮಂಗೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿ ಸಮೀಪದಲ್ಲಿ ನಡೆದಿದೆ.

ಮೇದಿಕೆರೆ ಗ್ರಾಮದ ಅಭಿಷೇಕ್ (20) ಹಾಗೂ ತಣಿಗೆರೆ ಗ್ರಾಮದ ಕಾರ್ತಿಕ್(18) ಮೃತ ದುರ್ದೈವಿಗಳು. ಬೈಕ್‌ನಲ್ಲಿ ಅತಿ ವೇಗವಾಗಿ ಬಂದು ಮುಖಾಮುಖಿ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಯುವಕರ ಮೃತದೇಹವನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಸಂತೆಬೆನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
PublicNext

PublicNext

28/11/2021 02:04 pm

Cinque Terre

45.44 K

Cinque Terre

3

ಸಂಬಂಧಿತ ಸುದ್ದಿ