ಬೆಳಗಾವಿ: ಸೇತುವೆಯ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಕಾನ್ಸಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಘಟನೆ ಜಿಲ್ಲೆಯ ಪಾಶ್ಚಾಪುರ-ಅಂಕಲಗಿ ರಸ್ತೆಯಲ್ಲಿ ಇಂದು ಸಂಭವಿಸಿದೆ.
ಗೋಕಾಕ್ ಗ್ರಾಮೀಣ ಠಾಣೆಯ ಆನಂದ ಸುಳಧಾಳ (24) ಮೃತ ಕಾನ್ಸ್ಟೇಬಲ್. ಆನಂದ ಗೋಕಾಕ್ ತಾಲೂಕಿನ ಹುದಲಿ ಗ್ರಾಮದ ನಿವಾಸಿಯಾಗಿದ್ದು, ಕರ್ತವ್ಯ ಮುಗಿಸಿ ಬೆಳಗ್ಗೆ ಮನೆಗೆ ತೆರಳಿದ್ದರು. ನಂತರ ಕನ್ಯೆ ನೋಡಲು ಹೊರಟಿದ್ದರು. ಈ ಸಂದರ್ಭದಲ್ಲಿ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಗೋಕಾಕ್ ತಾಲೂಕಿನ ಅಂಕಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
PublicNext
08/12/2021 07:13 pm