ರಾಂಚಿ: ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕನಿಷ್ಠ 16 ಜನರು ಸಾವನ್ನಪ್ಪಿದ ಭೀಕರ ಅಪಘಾತ ಜಾರ್ಖಂಡ್‌ನ ಪಾಕುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಈ ದುರ್ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದಾರೆ.
ಅತಿಯಾದ ವೇಗ, ಮಂಜು ಮುಸುಕಿದ ಕಾರಣ ಟ್ರಕ್ ಮತ್ತು ಬಸ್ ನಡುವೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಭೀಕರ ಅಪಘಾತದಲ್ಲಿ 16 ಪ್ರಯಾಣಿಕರು ಮೃತಪಟ್ಟಿದ್ದಾರೆ. 40 ಜನ ಪ್ರಯಾಣಿಕರಿದ್ದ ಬಸ್ ಸಾಹಿಬ್‌ಗಂಜ್‌ನ ಬರ್ಹರ್ವಾದಿಂದ ದಿಯೋಘರ್‌ನ ಜಸಿದಿಹ್‌ಗೆ ತೆರಳುತ್ತಿತ್ತು. ಆದರೆ ಸಾಹಿಬ್ ಗಂಜ್ಗೋ-ಬಿಂದಪುರ ಹೆದ್ದಾರಿಯ ಕಮರ್ದಿಹಾ ಗ್ರಾಮದ ಬಳಿ ಅಪಘಾತವಾಗಿದ್ದು, ಸಾವು ನೋವು ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಮದಪಾರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
PublicNext
05/01/2022 06:12 pm