ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಬಸ್ ಚಾಲಕನಿಗೆ ಜಾಮೀನು ಮಂಜೂರಾಗಿದೆ. ಅಪಘಾತದ ಬಗ್ಗೆ ವಿಚಾರಣೆ ನಡೆಸಿದ ಪೊಲೀಸರು ನಂತರ ಚಾಲಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ದುರಂತದಲ್ಲಿ ಚಾಲಕ ರಘು ಆರು ಜನರ ಸಾವಿಗೆ ಕಾರಣವಾಗಿದ್ದಾನೆ. ಇನ್ನು ಈ ಘಟನೆಯಲ್ಲಿ 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
7 ಗಾಯಾಳುಗಳಿಗೆ ವಿಕ್ಟೋರಿಯಾ, ನಿಮ್ಹಾನ್ಸ್‌ನಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ದುರಂತ ಸಂಭವಿಸಿದ ಸ್ಥಳದಲ್ಲಿಯೇ ನಾಲ್ವರು ಮೃತಪಟ್ಟಿದ್ದರು, ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಒಬ್ಬರು ಮೃತಪಟ್ಟಿದ್ದರು. ಚಿಕಿತ್ಸೆ ಫಲಿಸದೇ ರಾತ್ರಿ ವಿಕ್ಟೋರಿಯಾದಲ್ಲಿ ಮತ್ತೊಬ್ಬರು ಮೃತಪಟ್ಟಿದ್ದಾರೆ. ಅಜಿತ್, ಕಲ್ಯಾಣ್, ಶಾನವಾಜ್, ಬಾಬು ವಲಿ ಹಾಗೂ ಒಂದೇ ಕುಟುಂಬದ ಅಮೂಲ್ಯ, ಹರ್ಷಿತಾ ಸಾವನ್ನಪ್ಪಿದ್ದಾರೆ.
PublicNext
21/03/2022 01:15 pm