ವಿಜಯಪುರ: ತಂದೆ ಜೊತೆಗೆ ಬಟ್ಟೆ ತೊಳೆಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಶಿರೋಳ ಬಳಿಯ ಚಿಮ್ಮಲಗಿ ಏತ ನೀರಾವರಿ ಮುಖ್ಯ ಕಾಲುವೆಯಲ್ಲಿ ನಡೆದಿದೆ.
ಮುದ್ದೇಬಿಹಾಳ ಪಟ್ಟಣದ ಮಹಿಬೂಬ್ ನಗರ ನಿವಾಸಿ ರಿಜ್ವಾನ್ ಅಲ್ಲಾಭಕ್ಷ ತಾರಾಘರ (6) ಮೃತ ಬಾಲಕ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
PublicNext
02/04/2022 03:59 pm