ವಿಜಯಪುರ: ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ವಿಜಯಪುರ ಜಿಲ್ಲೆಯಲ್ಲಿ ದೇವರ ಹಿಪ್ಪರಗಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ರಾಮ ಶರಣಪ್ಪ ಗೊರನಾಳ (45), ಮಗ ಲಕ್ಷ್ಮಣ (22) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇವರು ಬೈಕ್ನಲ್ಲಿ ಕನ್ನೊಳ್ಳಿಯಿಂದ ದೇವರಹಿಪ್ಪರಗಿ ಕಡೆಗೆ ಹೊರಟಿದ್ದರು. ಈ ವೇಳೆ ಎದುರಿಗೆ ಬಂದ ಲಾರಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿ, ತಂದೆ-ಮಗ ರಸ್ತೆ ಮೇಲೆ ಬಿದ್ದಿದ್ದಾರೆ. ಪರಿಣಾಮ ಲಾರಿ ಮೈ ಮೇಲೆ ಬಿದ್ದು, ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶವ ಹೊರ ತೆಗೆಯಲು ಸಾರ್ವಜನಿಕರ ಜೊತೆ ಸೇರಿ ಪೊಲೀಸರು ಹರಸಾಹಸ ಪಟ್ಟರು.
ಈ ಘಟನೆ ಕುರಿತು ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದರು.
PublicNext
13/04/2022 12:33 pm