ಮೈಸೂರು: ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್‌ಬೆಟ್ಟ ಬಳಿ ಬುಧವಾರ ಬೊಲೆರೊ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ, ಬಾಬು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹುಣಸೂರಿನಿಂದ ಮದುವೆ ಮುಗಿಸಿ ಹೋಗುತ್ತಿದ್ದ ಬೊಲೆರೊ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. 6 ಜನ ಸ್ಥಳದಲ್ಲೇ ಮೃತಪಟ್ಟಿದ್ದರೆ, ಮೂವರಿಗೆ ಗಂಭೀರ ಗಾಯಗಳಾಗಿವೆ. ಮೂವರನ್ನು ಹುಣಸೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹುಣಸೂರು ಪೊಲೀಸರು ದೌಡಾಯಿಸಿದ್ದಾರೆ.
PublicNext
20/04/2022 06:13 pm