ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಹೈವೇಯಲ್ಲಿ ಅಪಘಾತ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ದಾವಣಗೆರೆ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಬರುವ ಕುಂದುವಾಡ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿದೆ.

ಶಿವಮೊಗ್ಗದ ಜಬಿ (58) ಶಿವಮೊಗ್ಗ, ಇವರ ಪತ್ನಿ ಅಬಿದಾಬಿ (55 ವರ್ಷ) ಹಾಗೂ ಮೊಮ್ಮಗಳಾದ ಗೌಸಿಯಾ (ಮೂರುವರೆ ವರ್ಷ) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಹೀರೋ ಹೊಂಡಾ ಬೈಕ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಲಾರಿಯು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಅಬಿದಾಬಿ ಮತ್ತು ಗೌಸಿಯಾ ಸ್ಥಳದಲ್ಲಿಯೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡ ಜಬಿಯನ್ನು ದಾವಣಗೆರೆ ನಗರದ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ದಕ್ಷಿಣ ಸಂಚಾರಿ ಮತ್ತು ವಿದ್ಯಾನಗರ ಪೊಲೀಸ್‌ ಠಾಣೆಯವರು ಆಗಮಿಸಿ ಸ್ಥಳ ಪರಿಶೀಲನೆ ನಡೆಸಿದರು‌. ಬೈಕ್ ಸ್ಕಿಡ್ ಆಗಿ ಲಾರಿ ಚಕ್ರಕ್ಕೆ ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದ್ದು, ಅಪಘಾತ ನಡೆದ ಬಳಿಕ ಸ್ಥಳೀಯ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

Edited By : Vijay Kumar
PublicNext

PublicNext

05/05/2022 09:11 am

Cinque Terre

70.15 K

Cinque Terre

2