ಧಾರವಾಡ: ಅಪರಿಚಿತ ವಾಹನವೊಂದು ಬೈಕ್‌ಗೆ ಹಿಂಬದಿಯಿಂದ ಗುದ್ದಿಕೊಂಡು ಹೋದ ಪರಿಣಾಮ ಬೈಕ್‌ನಲ್ಲಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ (ಬುಧವಾರ) ತಡರಾತ್ರಿ ನಡೆದಿದೆ.
ಹಳಿಯಾಳ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ರೇಣುಕರಾಜ್ ಮೃತ ದುರ್ದೈವಿ. ನಿನ್ನೆ ರಾತ್ರಿ ಬೈಕ್ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬದಿಯಿಂದ ಬಂದ ವಾಹನವೊಂದು ಡಿಕ್ಕಿ ಹೊಡೆದುಕೊಂಡು ಹೋಗಿದೆ. ಇದರಿಂದ ವಿದ್ಯಾರ್ಥಿಯ ತಲೆಗೆ ಗಂಭೀರ ಸ್ವರೂಪದ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
PublicNext
05/05/2022 11:50 am