ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಮದ್ವೆ ಮೆರವಣಿಗೆ ವೇಳೆ ಜನರ ಮೇಲೆ ಹರಿದ ಮಿನಿ ಲಾರಿ- ನಾಲ್ವರು ಸಾವು

ಕಲಬುರಗಿ: ಮದುವೆ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದವರ ಮೇಲೆ ಡಿಜೆ ಇದ್ದ ಮಿನಿ ಲಾರಿ ಹರಿದು ನಾಲ್ವರು ಸಾವನ್ನಪ್ಪಿ, 10ಕ್ಕೂ ಅಧಿಕ ಜನರು ಗಾಯಗೊಂಡ ಭೀಕರ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಕಡತಾಲ ತಾಂಡಾದಲ್ಲಿ ಕಳೆದ ಬುಧವಾರ ರಾತ್ರಿ ದುರಂತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಸೇಡಂ ತಾಲೂಕಿನ ಮೆದಕ ತಾಂಡಾದ ಸುಗಣಾಬಾಯಿ ಚೌವ್ಹಾಣ (40), ತೆಲಂಗಾಣದ ದುಂಕುಡನಾಯಕ ತಾಂಡಾದ ವಿಜ್ಜಿಬಾಯಿ ರಾಥೋಡ್ (30) ಹಾಗೂ ಕುಮಾರನಾಯಕ ರಾಥೋಡ್ (35) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ತಿಳಿದು ಬಂದಿದೆ.

ಮದನಾ ತಾಂಡದ ವಧು ಹಾಗೂ ಕಡತಾಲ ತಾಂಡಾದ ವರನ ಮದುವೆ ಗುರುವಾರ ಕಡತಾಲ ತಾಂಡಾದಲ್ಲಿ ನಡೆಯಬೇಕಾಗಿತ್ತು. ಮದುವೆಯ ಹಿಂದಿನ ದಿನ ಮದುಮಗಳನ್ನ ಕಡತಾಲ ತಾಂಡಾಕ್ಕೆ ಕರೆದುಕೊಂಡು ಬರಲಾಗಿತ್ತು. ಮದುಮಗಳನ್ನ ಸ್ವಾಗತಿಸಲು ತೆಲಂಗಾಣದಿಂದ ತರಿಸಲಾಗಿದ್ದ ಡಿಜೆ ಜೊತೆ ರಾತ್ರಿ ಮೆರವಣಿಗೆ ಮಾಡಲಾಗುತ್ತಿತ್ತು. ಬೇರೆ ಊರುಗಳಿಂದ ಆಗಮಿಸಿದ್ದ ಸಂಬಂಧಿಕರು ಕುಣಿದು ಸಂಭ್ರಮಿಸುವಾಗ ಡಿಜೆಯಿದ್ದ ಮಿನಿಲಾರಿ ಏಕಾಏಕಿ ಜನರ ಮೇಲೆ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹತ್ತಕ್ಕೂ ಅಧಿಕ ಜನರು ಗಾಯಗೊಂಡಿದ್ದು, ಕಲಬುರಗಿಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Edited By : Vijay Kumar
PublicNext

PublicNext

08/05/2022 10:25 am

Cinque Terre

71.7 K

Cinque Terre

0