ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ನಿಂತ ಲಾರಿಗೆ ಕಾರು ಡಿಕ್ಕಿ- ಸ್ಥಳದಲ್ಲೇ ದಂಪತಿ ಸಾವು

ತುಮಕೂರು: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಡ-ಹೆಂಡತಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ತುಮಕೂರು ತಾಲೂಕು ಮಲಸಂದ್ರ ಬಳಿ ನಡೆದಿದೆ.

ಈಶ್ವರಪ್ಪ (50) ಹಾಗೂ ಕಲ್ಪನಾ (42) ಮೃತ ದಂಪತಿ. ಈ ದಂಪತಿ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಈಶ್ವರಪ್ಪ ಪಿಆರ್​ಸಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ರೆ, ಆತನ ಪತ್ನಿ ಕಲ್ಪನಾ ಸರ್ಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಬ್ಬರು ಕಾರಿನಲ್ಲಿ ಹೆಗ್ಗೆರೆಯಿಂದ ತಮ್ಮ ಸ್ವಗ್ರಾಮ ದೇವನಹಳ್ಳಿಗೆ ಬರುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.

ಈಶ್ವರಪ್ಪ ಅವರ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
PublicNext

PublicNext

11/05/2022 07:59 pm

Cinque Terre

47.31 K

Cinque Terre

0