ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೆಹಲಿಯಲ್ಲಿ ಅಗ್ನಿ ದುರಂತ: 26 ಮಂದಿ ದುರ್ಮರಣ, ಹಲವರಿಗೆ ತೀವ್ರ ಗಾಯ

ದೆಹಲಿ: ದಕ್ಷಿಣ ದೆಹಲಿಯ ಮುಂಡ್ಕಾ ಮೆಟ್ರೋ ಸ್ಟೇಷನ್ ಬಳಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ 26 ಮಂದಿ ಮೃತಪಟ್ಟಿದ್ದು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವು-ನೋವಿನ ಸಂಖ್ಯೆ ಇನ್ನೂ ಹೆಚ್ಚುತ್ತಲೇ ಇದೆ ಎಂದು ಅಗ್ನಿಶಾಮಕ ಅಧಿಕಾರಿಗಳಿಂದ ತಿಳಿದು ಬಂದಿದೆ.

ರೈಲ್ವೇ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಕಟ್ಟಡವು ಮೂರು ಅಂತಸ್ತುಗಳನ್ನು ಹೊಂದಿದೆ. ಕಟ್ಟಡದಲ್ಲಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಾಗ ಒಳಗಿದ್ದ ಕೆಲವರು ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಕೆಳಗೆ ಹಾರಿದ್ದಾರೆ.‌ ಕಟ್ಟಡದಿಂದ ಹಾರಿದವರಲ್ಲಿ 30ಕ್ಕೂ ಹೆಚ್ಚು ಜನರಿದ್ದು ಇವರೆಲ್ಲ ತೀವ್ರವಾಗಿ ಗಾಯಗೊಂಡಿದ್ದಾರೆ. ಹೀಗಾಗಿ ಸಾವು-ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

Edited By : Nagaraj Tulugeri
PublicNext

PublicNext

13/05/2022 11:18 pm

Cinque Terre

195.03 K

Cinque Terre

6

ಸಂಬಂಧಿತ ಸುದ್ದಿ