ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಟಿಪ್ಪರ್‌ ಹರಿದು 50ಕ್ಕೂ ಅಧಿಕ ಕುರಿಗಳ ದಾರುಣ ಸಾವು !

ಚಿಕ್ಕೋಡಿ: ಟಿಪ್ಪರ್ ಲಾರಿ ಹರಿದು ಐವತ್ತಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿದ ದಾರುಣ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಕುರಿಗಾಹಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಐವತ್ತಕ್ಕೂ ಅಧಿಕ ಕುರಿಗಳು ಸಾವನ್ನಪ್ಪಿವೆ. ಗ್ರಾಮದ ಹೊರವಲಯದಲ್ಲಿ ರಸ್ತೆ ಮೇಲೆ ಕುರಿಗಳು ಬರುವ ಸಂದರ್ಭ ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಟಿಪ್ಪರ್ ಹಾಯ್ದಿದೆ. ಈ ವೇಳೆ 50ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ!

ಘಟನೆಯಲ್ಲಿ ಟಿಪ್ಪರ್ ಪಲ್ಟಿ ಆಗಿದ್ದು, ವಾಹನ ಬಿಟ್ಟು ಚಾಲಕ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸಂಕೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Edited By : Nagesh Gaonkar
PublicNext

PublicNext

22/07/2022 07:45 am

Cinque Terre

66.18 K

Cinque Terre

4