ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇನ್‌ಸ್ಟಾ ರೀಲ್‌ನಲ್ಲಿ ರೈಲು ಡಿಕ್ಕಿಯಾಗಿ ನೆಲಕ್ಕುರುಳಿದ ಯುವಕ ಸಾವು.!

ರೈಲ್ವೇ ಟ್ರ್ಯಾಕ್‌ನಲ್ಲಿ ಇನ್‌ಸ್ಟಾಗ್ರಾಮ್ ರೀಲ್ ಮಾಡಲು ಪ್ರಯತ್ನಿಸುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದ ಘಟನೆ ತೆಲಂಗಾಣದ ಹನಮಕೊಂಡ ಜಿಲ್ಲೆಯ ಕಾಜಿಪೇಟ್ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಹನಮಕೊಂಡ ಜಿಲ್ಲೆಯ ವಡ್ಡೆಪಲ್ಲಿ ನಿವಾಸಿ ಅಕ್ಷಯ್ ರಾಜ್ (17) ಮೃತ ಯುವಕ. ವಾರಂಗಲ್ ಜಿಲ್ಲೆಯ ಸ್ಥಳೀಯ ಕಾಲೇಜಿನಲ್ಲಿ 11ನೇ ತರಗತಿಯ ವಿದ್ಯಾರ್ಥಿಯಾದ ಅಕ್ಷಯ್ ಟ್ರ್ಯಾಕ್ ಉದ್ದಕ್ಕೂ ನಡೆದುಕೊಂಡು ಹೋಗಿ ಚಲಿಸುತ್ತಿರುವ ರೈಲನ್ನು ತನ್ನ ಹಿನ್ನೆಲೆಯಾಗಿ ಇನ್‌ಸ್ಟಾಗ್ರಾಮ್ ರೀಲ್ ಮಾಡುತ್ತಿದ್ದ. ಆದರೆ ವೇಗವಾಗಿ ಬೀಸಿದ ಗಾಳಿಯಿಂದಾಗಿ ಆತ ಮಾಡುತ್ತಿರುವ ಸ್ಟಂಟ್ ಆತನಿಗೇ ಮುಳುವಾಯಿತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಅಕ್ಷಯ್‌ನನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಈ ದುರ್ಘಟನೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕರ ಇನ್‌ಸ್ಟಾಗ್ರಾಮ್ ರೀಲ್ ಹುಚ್ಚಾಟಕ್ಕೆ ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ.

Edited By : Vijay Kumar
PublicNext

PublicNext

05/09/2022 06:51 pm

Cinque Terre

51.51 K

Cinque Terre

3