ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಈರುಳ್ಳಿಗೆ ಸಿಗಲಿಲ್ಲ ಸೂಕ್ತ ಬೆಲೆ: ನಷ್ಟ ಅನುಭವಿಸಿದ ರೈತ ಆತ್ಮಹತ್ಯೆ

ದಾವಣಗೆರೆ: ಈರುಳ್ಳಿ ಬೆಳೆಗೆ ಸೂಕ್ತ ಬೆಲೆ ಸಿಗದೆ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ಮನನೊಂದು ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮದ ರೈತನೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನ್ನ ಹೊಲದಲ್ಲೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೊಕ್ಕೆ ಗ್ರಾಮದ ಮೈಲಪ್ಪ (60) ಸಾವಿಗೆ ಶರಣಾದ ರೈತ.

ನಾಲ್ಕು ವರ್ಷದಿಂದ ಈರುಳ್ಳಿ ಬೆಳೆದಿದ್ದ ಮೈಲಪ್ಪ ಸತತ ಬೆಲೆ ಕುಸಿತದಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಬೀಜಗೊಬ್ಬರ ಹಾಗೂ ಇತರೆ ಖರ್ಚುಗಳಿಗಾಗಿ ಖಾಸಗಿಯಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಸಾಲದ ಭಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Edited By : Nagaraj Tulugeri
PublicNext

PublicNext

11/04/2022 04:22 pm

Cinque Terre

33.29 K

Cinque Terre

2