ಲಕ್ನೋ : ಹತ್ರಾಸ್ ಗ್ರಾಮದಲ್ಲಿ ನಡೆದ ಗ್ಯಾಂಗ್ ರೇಪ್ ಕೊಲೆ ಪ್ರಕರಣಕ್ಕೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಇದರ ಮಧ್ಯೆಯೇ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಮುಂದುವರಿದಿದ್ದು, ನಾಪತ್ತೆಯಾಗಿದ್ದ ಅಪ್ರಾಪ್ತೆಯ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಉತ್ತರ ಪ್ರದೇಶದ ಕಾನ್ಪುರ್ ದೇಹತ್ ಜಿಲ್ಲೆಯ ಹಳ್ಳಿಯಲ್ಲಿ ಸೆಪ್ಟೆಂಬರ್ 26 ರಂದು 15 ವರ್ಷದ ಹುಡುಗಿ ನಾಪತ್ತೆಯಾಗಿದ್ದಳು. ಆದರೆ ಇದೀಗ ಆಕೆಯ ಶವ ಜಮೀನೊಂದರಲ್ಲಿ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಡುಗಿಯ ಕುಟುಂಬದ ಇಬ್ಬರು ಸಂಬಂಧಿಕರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊಲೆ ಮಾಡುವ ಮೊದಲು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅಪ್ರಾಪ್ತೆಯ ಪೋಷಕರು ಆರೋಪಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಪೊಲೀಸರ ತಂಡ ಹೋಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಅಪ್ರಾಪ್ತೆಯ ಮೃತದೇಹದ ಭಾಗಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಈ ಕುರಿತು ತನಿಖೆ ಪೊಲೀಸರು ನಡೆಸುತ್ತಿದ್ದಾರೆ.
PublicNext
04/10/2020 11:13 am