ಮುಂಬೈ- ಪತ್ರಕರ್ತ ಅರ್ನಬ್ ಗೋಸ್ವಾಮಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪದ ಮೇಲೆ ಬಂಧಿತರಾಗಿದ್ದಾರೆ. ಮುಂಬೈನ ಆಲಿಬಾಗ್ ಕೋರ್ಟ್ ಅರ್ನಬ್ ಅವರನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಆದ್ರೆ ಅವರನ್ನು ಬಂಧಿಸಿರುವ ವಿಚಾರದಲ್ಲಿ ಸಾಕಷ್ಟು ಗೊಂದಲಗಳಿವೆ ಎಂದು ನ್ಯಾಯಾಲಯ ಹೇಳಿದೆ. 2018 ರಲ್ಲಿ ಅರ್ನಬ್ ಅವರಿಂದ ನನಗೆ ಮೋಸ ಆಗಿದೆ ಎಂದು ಅನ್ವಯ್ ನಾಯಕ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರ ತಾಯಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು? ಅನ್ವಯ್ ನಾಯಕ್ ಆತ್ಮಹತ್ಯೆ, ಅವರ ತಾಯಿ ಆತ್ಮಹತ್ಯೆ ಮತ್ತು ಆರೋಪಿಗಳ ನಡುವಿನ ಸಂಬಂಧ ಪತ್ತೆ ಹಚ್ಚಲು ಪೊಲೀಸರು ವಿಫಲರಾಗಿದ್ದಾರೆ.
ನಂತರ 2020ರ ಮೇ ತಿಂಗಳಲ್ಲಿ ಪೊಲೀಸರು ಪ್ರಕರಣದ ತನಿಖೆ ಪುನರಾರಂಭ ಮಾಡಲು ನ್ಯಾಯಾಲಯದಲ್ಲಿ ಅನುಮತಿ ಪಡೆದಿಲ್ಲ. ಅಕ್ಟೋಬರ್ 15ರಂದು ಮರು ತನಿಖೆ ಕುರಿತಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಹೀಗಾಗಿ ಮೇಲ್ನೋಟಕ್ಕೆ ಅರ್ನಬ್ ಬಂಧನ ಕಾನೂನು ಬಾಹಿರವಾಗಿ ಕಾಣುತ್ತಿದೆ ಎಂದು ನ್ಯಾಯಾಲಯ ಹೇಳಿದೆ.
ಈ ನಡುವೆ ನ್ಯಾಯಾಂಗ ಬಂಧನದಲ್ಲಿರುವ ಪತ್ರಕರ್ತ ಅರ್ನಬ್ ಗೋಸ್ವಾಮಿ ತಮಗೆ ಜಾಮೀನು ನೀಡುವಂತೆ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ.
PublicNext
06/11/2020 07:58 am