ಬೆಂಗಳೂರು- ಡಿಜೆ ಹಳ್ಳಿ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಸದ್ಯ ತಲೆ ಮರೆಸಿಕೊಂಡಿದ್ದಾರೆ. ಅವರು ನಗರದಲ್ಲೇ ಅವಿತುಕೊಂಡಿದ್ದಾರೆ ಎಂಬ ಮಾಹಿತಿ ಸಿಸಿಬಿ ಅಧಿಕಾರಿಗಳಿಗೆ ಸಿಕ್ಕಿದೆ.
ಶೀಘ್ರದಲ್ಲೇ ಸಂಪತ್ ರಾಜ್ ಬಂಧನವಾಗಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಮತ್ತಷ್ಟು ಚುರುಕಾಗಿರುವ ಸಿಸಿಬಿ ಪೊಲೀಸರು ಸಂಪತ್ ರಾಜ್ ಆಪ್ತರು, ಕಾರ್ಯಕರ್ತರು, ಸ್ನೇಹಿತರನ್ನೂ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ಜೊತೆಗೆ ಫ್ರೀಜರ್ ಟೌನ್, ಪುಲಿಕೇಶಿನಗರ ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದ್ದಾರೆ.
PublicNext
06/11/2020 09:46 am