ಶಿರಸಿ : ಶಿರಸಿ ಮೂಲದ ಯುವಕನೋರ್ವ ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಎನ್ನುವ ಆರೋಪದಡಿ ಎಎನ್ ಐ ತಂಡ ಯುವಕನನ್ನು ಬಂಧಿಸಿದೆ.
ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಬಂಧಿತ ಆರೋಪಿ. ರಾಷ್ಟ್ರೀಯ ತನಿಖಾ ದಳದ (ಎನ್ ಐಎ) ಪಶ್ಚಿಮ ಬಂಗಾಳ ವಿಭಾಗದ ತಂಡ ಬುಧವಾರ ಯುವಕನನ್ನು ಬಂಧಿಸಿ, ವಿಚಾರಣೆಗೆ ಕರೆದೊಯ್ದಿದೆ.
ಬಂಧಿತ ಸಯ್ಯದ್ ಇದ್ರಿಸ್ ಸಾಬ್ ಮುನ್ನಾ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯರೊಬ್ಬರ ಮಗನಾಗಿದ್ದು ಪಾಕಿಸ್ತಾನದಿಂದ ಕಾರ್ಯನಿರ್ವಹಿಸಿದ ಉಗ್ರ ಸಂಘಟನೆಯೊಂದರ ಸದಸ್ಯರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದ.
ಅಲ್ಲದೆ ನಿರಂತರ ವಾಟ್ಸಾಪ್ ಚಾಟಿಂಗ್ ಕೂಡ ನಡೆಸಿದ್ದ ಎಂಬ ಆರೋಪ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ಶಿರಸಿಗೆ ಆಗಮಿಸಿದ್ದ ಎನ್ ಐಎ ತಂಡ ಯುವಕನನ್ನು ಬಂಧಿಸಿದೆ.
ಈ ಬಗ್ಗೆ ಮಾಹಿತಿ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ದೇವರಾಜು ಖಚಿತ ಪಡಿಸಿದ್ದಾರೆ.
ಇವತ್ತಿನ ಬಂಧನ ಕಾರ್ಯಾಚರಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪೋಲಿಸರು ಸಹಕರಿಸಿದ್ದರು ಎಂದು ಹೇಳಿದ್ದಾರೆ.
PublicNext
11/11/2020 05:19 pm