ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜೊತೆಯಾಗಲು ಬಿಡಲಿಲ್ಲ ಜಾತಿ:ವಿಷ ಕುಡಿದು ಪ್ರಾಣ ಬಿಟ್ಟ ಪ್ರೇಮಿಗಳು

ರಾಯಚೂರು: ಮನೆಯವರು ತಮ್ಮ ಪ್ರೇಮಕ್ಕೆ ಒಪ್ಪದ ಹಿನ್ನೆಲೆ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಿರವಾರ ತಾಲೂಕಿನ ಮಲ್ಲಟ ಗ್ರಾಮದಲ್ಲಿ ನಡೆದಿದೆ. ಮಲ್ಲಟ ಗ್ರಾಮದ ಮಹೇಶ (20) ಮತ್ತು ಅಕ್ಷತಾ (18) ಆತ್ಮಹತ್ಯೆಗೆ ಶರಣಾಗಿರುವ ಪ್ರೇಮಿಗಳು.

ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿಗೆ ಜಾತಿ ಶತ್ರುವಾಗಿತ್ತು. ಇಬ್ಬರು ಬೇರೆ ಬೇರೆ ಜಾತಿಯವರಾಗಿದ್ದರಿಂದ ಎರಡೂ ಮನೆಗಳಲ್ಲೂ ಇವರ ಪ್ರೀತಿಗೆ ಒಪ್ಪಿಗೆ ಸಿಕ್ಕಿರಲಿಲ್ಲ. ಅಲ್ಲದೇ ಇತ್ತೀಚೆಗೆ ಯುವತಿಗೆ ಬೇರೆ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಲಾಗಿತ್ತು. ಮನೆಯವರನ್ನ ಒಪ್ಪಿಸಿ ಮದುವೆಯಾಗಲು ಬೇರೆ ಮಾರ್ಗವಿಲ್ಲದ ಹಿನ್ನೆಲೆ ಪ್ರೇಮಿಗಳು ಸಾವಿಗೆ ವಿಷ ಕುಡಿದು ಪ್ರಾಣ ಬಿಟ್ಟಿದ್ದಾರೆ. ಗ್ರಾಮದ ಹೊರವಲಯದ ಜಮೀನಿನಲ್ಲಿ ವಿಷ ಸೇವನೆ ಮಾಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ವೇಳೆ ಮನೆಯಿಂದ ಹೊರಬಿದ್ದ ಯುವಕ ಯುವತಿ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಘಟನೆ ಹಿನ್ನೆಲೆ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

12/11/2020 08:22 am

Cinque Terre

78.85 K

Cinque Terre

14

ಸಂಬಂಧಿತ ಸುದ್ದಿ