ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಸನ್ ಐ ಕೇರ್ ಸಂಸ್ಥಾಪಕ ಅರುಣ್ ಅನುಮಾನಾಸ್ಪದ ಸಾವು

ಚೆನ್ನೈ (ನವೆಂಬರ್ 16): ದೇಶದ ಪ್ರತಿಷ್ಠಿತ ಕಣ್ಣಿನ ಆಸ್ಪತ್ರೆಯಾದ ವಾಸನ್​ ಐ ಕೇರ್​ ಸ್ಥಾಪಕ ಎ.ಎಂ ಅರುಣ್​ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು. ಕೆಲವರು ಅರುಣ್ ಅವರದ್ದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುತ್ತಿದ್ದಾರೆ. ಆದರೆ, ಈ ಬಗ್ಗೆ ಇನ್ನೂವರೆಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ತಮಿಳುನಾಡಿನ ತಿರುಚ್ಚಿಯಲ್ಲಿ ತಮ್ಮ ಕುಟುಂಬ ನಡೆಸಿಕೊಂಡು ಹೋಗುತ್ತಿದ್ದ ಔಷಧಾಲಯ ಉದ್ಯಮವನ್ನು 1991ರಲ್ಲಿ ಅರುಣ್​ ಕೈಗೆತ್ತಿಕೊಂಡರು. ವಾಸನ್​ ಮೆಡಿಕಲ್​ ಹಾಲ್​ ಎಂಬುದು ಇದರ ಹೆಸರಾಗಿತ್ತು. 2002ರಲ್ಲಿ ತಿರುಚ್ಚಿಯಲ್ಲಿ ವಾಸನ್​ ಐ ಕೇರ್​ ಹೆಸರಿನ ಕಣ್ಣಿನ ಆಸ್ಪತ್ರೆಯನ್ನು ಅರುಣ್​ ಆರಂಭಿಸಿ​ದರು. ಇದು ಅವರು ಸ್ಥಾಪಿಸಿದ ಮೊದಲ ಕಣ್ಣಿನ ಆಸ್ಪತ್ರೆಯಾಗಿದೆ.

ನಂತರ ವರುಣ್​ ದಕ್ಷಿಣ ಭಾರತದಲ್ಲಿ 100ಕ್ಕೂ ಅಧಿಕ ಕಡೆಗಳಲ್ಲಿ ಕಣ್ಣಿನ ಆಸ್ಪತ್ರೆಯನ್ನು ಆರಂಭಿಸಿದರು. ವಾಸನ್​ ಐ ಕೇರ್​ ಕಣ್ಣಿನ ಚಿಕಿತ್ಸೆಯಲ್ಲಿ ಸಾಕಷ್ಟು ಹೆಸರು ಮಾಡಿತ್ತು. ಆದರೆ, 2015ರಲ್ಲಿ ಆಗಿನ ಹಣಕಾಸು ಸಚಿವ ಪಿ. ಚಿದಂಬರಂ ಕಾರ್ತಿ ಭಾಗಿಯಾಗಿದ್ದ ಅಕ್ರಮ ಹಣ ವಹಿವಾಟಿನ ಪ್ರಕರಣದಲ್ಲಿ ವಾಸನ್​ ಐ ಕೇಸ್​ ಹೆಸರು ಸೇರಿಕೊಂಡಿತ್ತು. ಕಾರ್ತಿ ಕಪ್ಪು ಹಣವನ್ನು ಬಿಳಿ ಮಾಡಲು ಈ ಸಂಸ್ಥೆಯನ್ನು ಬಳಕೆ ಮಾಡಿಕೊಂಡಿದ್ದರು ಎನ್ನುವ ಆರೋಪ ಕೇಳಿ ಬಂದಿತ್ತು. ಅದರ ಬೆನ್ನಲ್ಲೇ ಹಲವು ಬಾರಿ ವಾಸನ್​ ಐ ಕೇರ್​ ಮೇಲೆ ಆದಾಯ ತೆರಿಗೆ ಇಲಾಖೆ ಹಾಗೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದರು.

Edited By : Nagaraj Tulugeri
PublicNext

PublicNext

16/11/2020 07:19 pm

Cinque Terre

110.43 K

Cinque Terre

10

ಸಂಬಂಧಿತ ಸುದ್ದಿ