ಮುಂಬೈ: ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ಭಾರಿ ತೊಂದರೆಯೊಂದು ತಪ್ಪಿದಂತ್ತಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಮಟ್ಟದಲ್ಲಿಯೇ ದಾಳಿ ನಡೆಸಲು ಸಜ್ಜಾಗಿದ್ದ ಇಬ್ಬರು ಜೈಷ್-ಇ-ಮೊಹಮ್ಮದ್ ಉಗ್ರ ಸಂಟನೆಯ ಭಯೋತ್ಪಾದಕರನ್ನು ಬಂಧಸಿದ ಪೊಲೀಸರು ಸಮಾಜದ ನೆಮ್ಮದಿ ಕಾದಿದ್ದಾರೆ.
ದೆಹಲಿಯ ಸರಾಯ್ ಕೇಲ್ ಖಾನ್ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವ ಅಧಿಕಾರಿಗಳು, ವಿಚಾರಣೆಗೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಬಂಧಿತ ಉಗ್ರರನ್ನು ಅಬ್ದುಲ್ ಲತೀಫ್ (22) ಹಾಗೂ ಮೊಹಮ್ಮದ್ ಅಶ್ರಫ್ ಖತಾನಾ (20) ಎಂದು ಗುರ್ತಿಸಲಾಗಿದೆ.
ಇಬ್ಬರು ಜಮ್ಮು ಮತ್ತು ಕಾಶ್ಮೀರದ ನಿವಾಸಿಗಳಾಗಿದ್ದು, ಪಾಕಿಸ್ತಾನದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ಹೇಳಲಾಗುತ್ತಿದೆ.
ಕಳೆದ ರಾತ್ರಿ 10.15ರ ಸುಮಾರಿದೆ ದೆಹಲಿಯ ಸರಾಯ್ ಕೇಲ್ ಖಾನ್ ಪ್ರದೇಶದಲ್ಲಿ ದಾಳಿ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಅರೆ-ಸ್ವಯಂಚಾಲಿತ ಪಿಸ್ತೂಲುಗಳು ಮತ್ತು 10 ಜೀವಂತ ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
PublicNext
17/11/2020 10:12 am