ಬೆಂಗಳೂರು: ನಗರದಲ್ಲಿ ಬಡ ವ್ಯಾಪಾರಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದ ಆರೋಪಿಗಳನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಯಲಹಂಕ ಸುತ್ತಮುತ್ತ ರಸ್ತೆ ಬದಿಯಲ್ಲಿರುವ ಬಡ ವ್ಯಾಪಾರಿಗಳನ್ನು ಗುರಿಯಾಗಿಸಿ ಹಫ್ತಾ ವಸೂಲಿ ಮಾಡುತ್ತಿದ್ದ ಕುಖ್ಯಾತ ಪಾಪಣ್ಣ ಗ್ಯಾಂಗ್ನ ವನರನ್ನು ಪೊಲೀಸರು ಬಂಧಿಸಿದ್ದಾರೆ.
ಪಾಪಣ್ಣ ಜೈಲಿನಲ್ಲಿರುವ ಹಿನ್ನೆಲೆಯಲ್ಲಿ ಜಾಮೀನು ಪಡೆದುಕೊಳ್ಳಲು ಹಣದ ಅಭಾವವಿದ್ದ ಕಾರಣ ಪಾಪಣ್ಣ ಸಹಚರರು ಹಫ್ತಾ ವಸೂಲಿಗೆ ಇಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳನ್ನು , ಸಂಜಯ್, ನವೀನ್, ಮಂಜುನಾಥ್, ರಮೇಶ್, ಪ್ರಶಾಂತ್, ಕುಮಾರ್ ಸ್ಯಾಮುಯಲ್, ಉಮೇಶ್, ಸುಬ್ರಮಣಿ, ಮಂಜುನಾಥ್, ರಮೇಶ್, ನಾಗರಾಜ್ ಹಾಗೂ ಸುರೇಶ್ ಎಂದು ಗುರುತಿಸಲಾಗಿದೆ.
ಶ್ರೀಪಾದಶಾಸ್ರ್ತೀ, ವಿನ್ಸೆಂಟ್ ಬಾಬು, ಆಕಾಶ್ ನಾಯ್ಡು ಬಂಧಿತ ಆರೋಪಿಗಳು. ಬಂಧಿತರಿಂದ 1.5ಲಕ್ಷ ನಗದು, 7 ಗ್ರಾಂ ಚಿನ್ನ ಎರಡು ದ್ವಿಚಕ್ರ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.
PublicNext
17/11/2020 10:33 pm