ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

3ರ ಬಾಲಕಿ ಮೇಲೆ 14, 15 ವಯಸ್ಸಿನ ಬಾಲಕರಿಂದ ಗ್ಯಾಂಗ್‌ರೇಪ್

ಮುಂಬೈ: ಮೂರು ವರ್ಷದ ಬಾಲಕಿಯ ಮೇಲೆ 14, 15 ವರ್ಷದ ಇಬ್ಬರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ ಅಮಾನವೀಯ ಮುಂಬೈನ ಸಂಜಯ್ ಗಾಂಧಿ ರಾಷ್ಟ್ರೀಯ ಉದ್ಯಾನದಲ್ಲಿ ನಡೆದಿದೆ.

ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಲ್ಲಿಂದ ಮನೆಗೆ ವಾಪಸ್‌ ಆದ ಬಾಲಕಿ ನೋವಿನಿಂದ ಅಳುತ್ತಿರುವುದನ್ನು ಗಮನಿಸಿದ ಪೋಷಕರು ಆಕೆಯನ್ನು ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ನಡೆದ ಘಟನೆಯ ಬಗ್ಗೆ ಹೇಳಿದ್ದಾಳೆ.

ಈ ಸಂಬಂಧ ಸಂತ್ರಸ್ತೆಯ ಪೋಷಕರು ಕಸ್ತೂರ್ಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ವೈದ್ಯಕೀಯ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸಿ ಚೇತರಿಸಿಕೊಳ್ಳುತ್ತಿದ್ದಾಳೆ ಎಂದು ವರದಿಯಾಗಿದೆ.

Edited By : Vijay Kumar
PublicNext

PublicNext

18/11/2020 12:57 pm

Cinque Terre

63.14 K

Cinque Terre

7

ಸಂಬಂಧಿತ ಸುದ್ದಿ