ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಮತ್ತೆ ಉಗ್ರರು ಅಮಾನುಷ ಅಟ್ಟಹಾಸ ತೋರಿದ್ದಾರೆ. ಸೈನಿಕರ ವಾಹನವನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 10 ಮಂದಿ ನಾಗರಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.
ಪುಲ್ವಾಮಾದ ಕಾಕಾಪೋರದಲ್ಲಿ ಸಿಆರ್‌ಪಿಎಫ್ ಮತ್ತು ಪೊಲೀಸರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದಾರೆ. ಆದರೆ ಗ್ರೆನೇಡ್ ಗುರಿ ತಪ್ಪಿ ರಸ್ತೆಯ ಮೇಲೆ ಬಿದ್ದಿದೆ. ಪರಿಣಾಮ 10 ಮಂದಿ ನಾಗರಿಗರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
PublicNext
18/11/2020 08:10 pm