ವಿಜಯಪುರ: ಗುಮ್ಮಟನಗರಿಯಲ್ಲಿ ಕಳೆದ ಕೆಲ ದಿನಗಳಿಂದ ಗುಂಡಿನ ಸದ್ದು, ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಸ್‌ಪಿ ಅನುಪಮ್ ಅಗರ್ವಾಲ್ ಅವರು ರೌಡಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ವಿವಿಧ ಪ್ರಕರಣಗಳಲ್ಲಿ ಗುರುತಿಸಿಕೊಂಡಿರುವ ರೌಡಿಗಳಿಗೆ ಪರೇಡ್ ನಡೆಸಲಾಯಿತು. ಈ ವೇಳೆ ಬಡ್ಡಿ ವ್ಯವಹಾರ ನಡೆಸುತ್ತಿದ್ದ ರೌಡಿ ಶೀಟರ್ಗೆ ಅನುಪಮ್ ಅಗರ್ವಾಲ್ ಅವರು ಕಪಾಳ ಮೋಕ್ಷ ಮಾಡಿದ್ದಾರೆ. ಅಷ್ಟೇ ಅಲ್ಲದೆ 110ಕ್ಕೂ ಹೆಚ್ಚು ರೌಡಿಗಳಿಗೆ ಎಚ್ಚರಿಕೆ ಸಹ ನೀಡಿದರು.
PublicNext
20/11/2020 12:09 pm