ಹಾಸನ:ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಪರಸ್ಪರ ಅಪ್ಪಿಕೊಂಡ ಸ್ಥಿತಿಯಲ್ಲಿ ಪ್ರೇಮಿಗಳಿಬ್ದರ ಮೃತದೇಹ ಪತ್ತೆಯಾಗಿದೆ. ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ನವೆಂಬರ್ 16 ರಂದು ಬೈಕ್ ನಿಲ್ಲಿಸಿ, ಸ್ಥಳದಲ್ಲೇ ಚಪ್ಪಲಿ ಬಿಟ್ಟು ಪ್ರೇಮಿಗಳು ನಾಪತ್ತೆಯಾಗಿದ್ದರು.
ನಂತರ ಹೇಮಾವತಿ ಕಾಲುವೆಗೆ ಹಾರಿದ್ದು ಇದೀಗ ಇವರಿಬ್ಬರ ಮೃತದೇಹ ಪತ್ತೆಯಾಗಿದೆ. ಮೃತರನ್ನು ಹಿರಿಸಾವೆ ಗ್ರಾಮದ ಸುಶ್ಮಿತ(18), ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಎಂದು ಗುರುತಿಸಲಾಗಿದೆ. ಪ್ರೇಮಿಗಳು ನಾಪತ್ತೆಯಾದಾಗ ಹಿರಿಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಿಸ್ಸಿಂಗ್ ಪ್ರಕರಣ ದಾಖಲಾಗಿತ್ತು.
ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ನಾಲೆಯಲ್ಲಿ ಪ್ರೇಮಿಗಳ ಮೃತದೇಹ ಪತ್ತೆಯಾಗಿದೆ. ಪ್ರೇಮಿಗಳಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ. ಐಟಿಐ ಓದುತ್ತಿದ್ದ ರಮೇಶ್ ಹಾಗೂ ಪದವಿ ಓದುತ್ತಿದ್ದ ಸುಶ್ಮಿತಾ ನಡುವೆ ಕಳೆದ ಒಂದು ವರ್ಷದಿಂದ ಪ್ರೀತಿ ಇತ್ತು ಎಂದು ತಿಳಿದುಬಂದಿದೆ. ಆದರೆ ಅಂತರ್ಜಾತಿ ಪ್ರೇಮವನ್ನು ಮನೆಯವರು ವಿರೋಧಿಸಿದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಮೃತ ದೇಹಗಳು ಪರಸ್ಪರ ಹಗ್ಗ ಕಟ್ಟಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ. ಹೀಗಾಗಿ ಪ್ರೇಮಿಗಳು ಹಗ್ಗ ಕಟ್ಟಿಕೊಂಡೇ ಕಾಲುವೆಗೆ ಹಾರಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.
PublicNext
20/11/2020 03:44 pm