ಬೆಂಗಳೂರು: ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಕಮಲ ಕೊಲೆಯಾದ ದುರ್ದೈವಿ. ಪ್ರಿಯಕರ ದಿಲೀಪ್ ಈಕೆಯನ್ನು ಲಾಡ್ಜ್ ಗೆ ಕರೆದೊಯ್ದು ಕೊಲೆ ಮಾಡಿದ್ದಾನೆ. ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ.
ಕಮಲ ಅಂಗನವಾಡಿ ಟೀಚರ್ ಆಗಿ ಕೆಲಸ ಮಾಡುತ್ತಾ ಇದ್ದಳು. ಕಲಾಸಿಪಾಳ್ಯದ ಅರ್ಚನಾ ಲಾಡ್ಜ್ನಲ್ಲಿ ಕಮಲಳನ್ನು ದಿಲೀಪ್ ಕೊಲೆ ಮಾಡಿದ್ದಾನೆ. ಸದ್ಯ ಕೊಲೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಕೊಲೆ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
28/11/2020 10:56 am