ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ.
ನಿನ್ನೆ ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರನ್ನು ಮನೆಯವರು ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತೋಷ್ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 309ರ ಅಡಿಯಲ್ಲಿ ಎಫ್‍ಐಆರ್ ದಾಖಲಾಗಿದೆ.
ಎಂಎಸ್ ರಾಮಯ್ಯ ಆಸ್ಪತ್ರೆಯಿಂದ ಎಂಎಲ್ ಸಿ ರಿಪೋರ್ಟ್ ರವಾನೆ ಮಾಡಲಾಗಿದ್ದು, ಈ ವರದಿ ಸದಾಶಿವನಗರ ಪೊಲೀಸರ ಕೈ ಸೇರಿದೆ. ವರದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ದಾಖಲಾಗಿದೆ. ಅಲ್ಲದೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸದ್ಯ ಮಾತಾನಾಡಲಿಕ್ಕೆ ಶಕ್ತನಲ್ಲ ಎಂದು ಉಲ್ಲೇಖ ಮಾಡಲಾಗಿದೆ. ಈ ನಡುವೆ ನಮ್ಮ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇಲ್ಲ. ನಿನ್ನೆ ರಾತ್ರಿ ಖಿನ್ನರಾದಂತೆ ಪತಿ ಕಾಣುತ್ತಿದ್ದರು ಎಂದು ಸಂತೋಷ್ ಅವರ ಪತ್ನಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
PublicNext
28/11/2020 11:30 am