ಚಿಕ್ಕಮಗಳೂರು: ಸ್ಥಳೀಯರಿಗೆ ಬೆದರಿಸಿ ಲಂಚ ವಸೂಲಿ ಮಾಡುತ್ತಿದ್ದ ಆರೋಪದಡಿ ಪಿಎಸ್‍ಐ ಸೇರಿ 8 ಮಂದಿ ಪೊಲೀಸರು ಅಮಾನತುಗೊಳಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಈ ಸಂಬಂಧ ಮಾಹಿತಿ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನ ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಆರೋದಡಿಯೇ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ ಕುಮಾರ್, ನವೀನ್ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಮಾನತುಗೊಂಡ ಬಸವನಹಳ್ಳಿ ಪೊಲೀಸರು ಗಾಂಜಾ ಕೇಸ್‍ನಲ್ಲಿ ಫಿಕ್ಸ್ ಮಾಡುವುದಾಗಿ ಬೆದರಿಸಿ ಸ್ಥಳೀಯರಿಬ್ಬರಿಂದ 3.40 ಲಕ್ಷ ರೂ. ಪಡೆದಿದ್ದರು ಎಂದು ಹೇಳಲಾಗಿದೆ. ಇನ್ನು ಆಲ್ದೂರು ಠಾಣೆಯ ಪೊಲೀಸರು ಸಹ ಹೋಮ್ ಸ್ಟೇ ಮಾಲೀಕನಿಗೆ ಬೆದರಿಸಿ ಲಂಚ ಪಡೆದಿದ್ದರು ಎನ್ನಲಾಗಿದೆ.
PublicNext
28/11/2020 10:55 pm