ಮುಂಬೈ: ಖ್ಯಾತ ಸಾಮಾಜಿಕ ಕಾರ್ಯಕರ್ತ ಬಾಬಾ ಆಮ್ಟೆ ಅವರ ಮೊಮ್ಮಗಳು ಡಾ.ಶೀತಲ್ ಆಮ್ಟೆ ಕಾರಜಿಗಿ (39) ಅವರು ಮಹಾರಾಷ್ಟ್ರದ ವರೋರಾದಲ್ಲಿ ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದವರ ಕುಟುಂಬದ ಮೂಲಗಳು ತಿಳಿಸಿವೆ. ಆದರೆ ಶೀತಲ್ ವಿಷದ ಚುಚ್ಚುಮದ್ದು ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎನ್ನುವ ಬಗ್ಗೆ ವಿವರಣೆ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಶೀತಲ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಂದ್ರಾಪುರಕ್ಕೆ ಕಳುಹಿಸಲಾಗಿದೆ.
ಬಾಬಾ ಆಮ್ಟೆ ಅವರು ವರೋರಾದಲ್ಲಿ ಸ್ಥಾಪಿಸಿರುವ ಮಹಾರೋಗಿ ಸೇವಾ ಸಮಿತಿಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಆಗಿ ಸೇವೆ ಸಲ್ಲಿಸುತ್ತಿದ್ದ ಶೀತಲ್, ಸಮಿತಿಯ ನಿರ್ವಹಣೆ ಕುರಿತು ಟ್ರಸ್ಟ್‌ನ ಸದಸ್ಯರು ಮತ್ತು ಆಮ್ಟೆ ಕುಟುಂಬದವರ ವಿರುದ್ಧ ಸಾರ್ವಜನಿಕವಾಗಿ ಗಂಭೀರ ಆರೋಪಗಳನ್ನು ಮಾಡಿದ್ದರು.
PublicNext
30/11/2020 07:37 pm