ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಾಯಿ

ಮಂಡ್ಯ: ಇಬ್ಬರು ಮಕ್ಕಳನ್ನು ನೇಣಿಗೆ ಹಾಕಿದ ತಾಯಿ, ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕುಪ್ಪಳ್ಳಿ ಗ್ರಾಮದಲ್ಲಿ ನಡೆದಿದೆ.

ತಾಯಿಯನ್ನು ನಿವೇದಿತಾ (26) ಎಂದು ಗುರುತಿಸಲಾಗಿದೆ. ಈಕೆ ತನ್ನ ಮಕ್ಕಳಾದ 6 ವರ್ಷದ ಗಾನವಿ ಹಾಗೂ 4 ವರ್ಷದ ಉಲ್ಲಾಸ್ನನ್ನು ನೇಣಿಗೆ ಹಾಕಿ ಸಾಯಿಸಿದ್ದಾಳೆ. ನಂತನ ತಾನೂ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾಳೆ.

ನಲ್ಲಹಳ್ಳಿ ನಿವಾಸಿ ನಿವೇದಿತಾಳನ್ನು ಕಳೆದ 7 ವರ್ಷಗಳ ಹಿಂದೆ ಕೃಷ್ಣೇಗೌಡ ಎಂಬವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ದಾಂಪತ್ಯದಲ್ಲಿ ಯಾವುದೇ ಸಮಸ್ಯೆ ಇರಲಿಲ್ಲ. ಆದರೆ ನಿವೇದಿತಾ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
PublicNext

PublicNext

01/12/2020 08:59 am

Cinque Terre

75.67 K

Cinque Terre

1

ಸಂಬಂಧಿತ ಸುದ್ದಿ