ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಗಳು ಜೀವ ಬೆದರಿಕೆ ಹಾಕಿದ್ದಾಳೆ: ಜೆ ಎನ್ ಯು ಮಾಜಿ ನಾಯಕಿ ಮೇಲೆ ತಂದೆ ಆರೋಪ

ಶ್ರೀನಗರ: ನನ್ನ ಮನೆಯಲ್ಲಿ ದೇಶ ವಿರೋಧಿ ಚಟುವಟಿಕೆ ನಡೆಯುತ್ತಿದೆ. ಇದನ್ನು ವಿರೋಧಿಸಿದ್ದಕ್ಕೆ ನನ್ನ ಮಗಳ ಭದ್ರತಾ ಸಿಬ್ಬಂದಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿ ಜೆ ಎನ್ ಯು ನಾಯಕಿ ಶೆಹ್ಲಾ ರಷೀದ್ ತಂದೆ ಅಬ್ದುಲ ರಷೀದ್ ಅವರು ಕಾಶ್ಮೀರ ಡಿಜಿಪಿಗೆ ಪತ್ರ ಬರೆದಿದ್ದಾರೆ.

ಜಮ್ಮು ಕಾಶ್ಮೀರ ಪೀಪಲ್ಸ್‌ ಮೂಮೆಂಟ್‌(ಜೆಕೆಪಿಎಂ) ಪರ ಸೇರಲು ಶೈಲಾ 3 ಕೋಟಿ ರೂ. ಹಣವನ್ನು ಪಡೆದಿದ್ದಾಳೆ. ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಲು ಅಕ್ರಮ ಮಾರ್ಗಗಳಿಂದ ಹಣ ಬಂದಿದೆ ಎಂದು ಉಲ್ಲೇಖಿಸಿದ್ದಾರೆ.

2 ತಿಂಗಳ ಹಿಂದೆ ಈಗಾಗಲೇ ಯುಎಪಿಎ ಅಡಿ ಬಂಧನವಾಗಿರುವ ಜಹೂರ್‌ ವಟಾಲಿ ನನ್ನ ಜೊತೆ ಮಾತನಾಡಿದ್ದ. ಆತ ಶೆಹ್ಲಾಗೆ ಮೂರು ಕೋಟಿ ರೂ. ನೀಡುತ್ತೇನೆ. ಆಕೆ ಜಮ್ಮು ಕಾಶ್ಮೀರ ರಾಜಕೀಯಕ್ಕೆ ಬರಬೇಕು ಎಂದು ಬೇಡಿಕೆ ಇಟ್ಟಿದ್ದ. ನಾನು ಈ ಹಣವನ್ನು ಪಡೆದುಕೊಳ್ಳಲಿಲ್ಲ. ಅಷ್ಟೇ ಅಲ್ಲದೇ ಮಗಳಿಗೂ ಈ ರೀತಿಯ ವ್ಯವಹಾರದಲ್ಲಿ ಭಾಗಿಯಾಗಬೇಡ ಎಂದು ತಿಳಿಸಿದ್ದೆ ಎಂದು ಹೇಳಿದ್ದಾರೆ.

ನನ್ನ ವಿರುದ್ಧ ಪತ್ನಿ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆಯ ಅಡಿ ಕೇಸ್‌ ಹಾಕಿದ್ದಾಳೆ. ಪಿತೂರಿ ನಡೆಸಿ ನನ್ನನ್ನು ಮನೆಯಿಂದ ಹೊರ ಹಾಕಿದ್ದಾಳೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಶೆಹ್ಲಾ ರಷೀದ್ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ತಂದೆ ಸುಳ್ಳು ಹೇಳುತ್ತಿದ್ದಾರೆ. ಅವರು ನನ್ನ ತಾಯಿಗೆ ಹಿಂಸೆ ನೀಡುತ್ತಿದ್ದಾರೆ. ತಾಯಿ ಜೊತೆ ನಾನು, ಸಹೋದರಿ ದೂರು ನೀಡಿದ್ದೇವೆ. ಇದು ನನ್ನ ಕೌಟುಂಬಿಕ ವಿಚಾರ. ಇದರಲ್ಲಿ ಸುಳ್ಳು ಹೇಳುತ್ತಿರುವ ತಂದೆಯನ್ನು ನಂಬಬೇಡಿ ಎಂದು ಟ್ವೀಟ್‌ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

01/12/2020 09:46 am

Cinque Terre

70.1 K

Cinque Terre

2

ಸಂಬಂಧಿತ ಸುದ್ದಿ