ಪಾಟ್ನಾ: ಪತಿಯೋರ್ವ ಪತ್ನಿ ಸೇರಿದಂತೆ ಐವರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬಿಹಾರದ ಸಿವಾನ್ ಜಿಲ್ಲೆಯ ಭಗವಾನಪುರದಲ್ಲಿ ನಡೆದಿದ್ದು, ದಾಳಿಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, ಪತ್ನಿ ಮತ್ತು ಮಗ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಭಗವಾನಪುರದ ನಿವಾಸಿ ಅವಧೇಶ್ ಚೌಧರಿ ಮಕ್ಕಳನ್ನ ಕೊಲೆಗೈದ ಪಾಪಿ. ಪೊಲೀಸರು ಆರೋಪಿಯನ್ನ ಬಂಧಿಸಲಾಗಿದೆ. ಆದರೆ ಆರೋಪಿಯು ತಾನು ಕೊಲೆ ಮಾಡಿಲ್ಲ. ದೆವ್ವ ನನ್ನ ಕೈಯಲ್ಲಿಂದ ಮಾಡಿಸಿದೆ ಎಂದು ನಾಟಕ ಆಡುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಕ್ಷುಲ್ಲಕ ವಿಚಾರಕ್ಕೆ ಅವಧೇಶ್ ದಂಪತಿಯ ಮಧ್ಯೆ ಜಗಳವಾಗಿತ್ತು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಪಾಪಿ ಮನೆಯಲ್ಲಿದ್ದ ಕೊಡಲಿಯಿಂದ ಎಲ್ಲರ ಮೇಲೆ ದಾಳಿ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಇಬ್ಬರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪತ್ನಿ ಹಾಗೂ ಮಗ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
PublicNext
01/12/2020 06:25 pm