ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುನಃ ಪಂಜರದ ಗಿಣಿಯಾದ ರಾಗಿಣಿ: ಜೈಲಿನಲ್ಲೇ ಹೊಸ ವರ್ಷ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಪಾಲಾಗಿದ್ದ ನಟಿ ರಾಗಿಣಿಗೆ ಇನ್ನೂ ಒಂದು ತಿಂಗಳು ಜೈಲುವಾಸ ಫಿಕ್ಸ್ ಆಗಿದೆ

ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಹೀಗಾಗಿ ಚಂದನವನದ ಮದನಾರಿ ಮತ್ತೆ ಮುದ್ದೆ ಮುರಿಯಬೇಕಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 4ರಂದು ತುಪ್ಪದ ಬೆಡಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರಾಗಿಣಿ, ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

Edited By : Nagaraj Tulugeri
PublicNext

PublicNext

04/12/2020 02:45 pm

Cinque Terre

82.82 K

Cinque Terre

3