ಶಿವಮೊಗ್ಗ: ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದ ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಮೂಲದ ಮಹಿಳೆಯೊಬ್ಬರು ಕೊರೊನ ತಗುಲಿದ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅತ್ಯಾಚಾರಕ್ಕೊಳಗಾದ ಬಾಲಕಿ ತನ್ನ ತಾಯಿಯನ್ನು ನೋಡಿಕೊಳ್ಳಲು ಕಳೆದ ಹಲವಾರು ದಿನಗಳಿಂದ ವಾರ್ಡ್ ಹೊರಗೆ ಇರುತ್ತಿದ್ದಳು ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಶಿವಮೊಗ್ಗ ನಗರದಲ್ಲಿ 144 ಸೆಕ್ಷನ್ ಪ್ರಕಾರ ನಿಷೇಧಾಜ್ಞೆ ಜಾರಿಯಲ್ಲಿದೆ. ಅಗತ್ಯ ವಸ್ತುಗಳು ಸಕಾಲಕ್ಕೆ ಸಿಗುತ್ತಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಕಾಮುಕರು ಆಕೆಗೆ ಊಟ ಕೊಡಿಸೋದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದಿದ್ದಾರೆ. ಕಾರಿನಲ್ಲೇ ಒಟ್ಟು ನಾಲ್ವರು ಸೇರಿ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ಆಪ್ತ ಸಮಾಲೋಚನೆಯಲ್ಲಿ ಹೇಳಿದ್ದಾಳೆ.
ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
06/12/2020 05:09 pm