ಹೈದರಾಬಾದ್: ಹೆಮ್ಮಾರಿ ಕೊರೊನಾ ವೈರಸ್‌ನಿಂದ ದೇಶವು ನಲುಗಿ ಹೋಗಿದೆ. ಈ ನಡುವೆ ಆಂಧ್ರ ಪ್ರದೇಶದಲ್ಲಿ ಮತ್ತೊಂದು ರೋಗದ ಭೀತಿ ಎದುರಾಗಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ.
ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಎಲೂರು ಪಟ್ಟಣದಲ್ಲಿ ಪತ್ತೆಯಾಗಿರುವ ನಿಗೂಢ ರೋಗಕ್ಕೆ ಓರ್ವ ಬಲಿಯಾಗಿದ್ದು, 300ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪೈಕಿ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯವಾಡಕ್ಕೆ ಶಿಫ್ಟ್ ಮಾಡಲಾಗಿದೆ.
ನಿಗೂಢ ರೋಗ ಕಾಣಿಸಿಕೊಂಡವರಲ್ಲಿ ತಲೆನೋವು, ವಾಂತಿ, ತಲೆ ತಿರುಗುವಿಕೆ ಹಾಗೂ ಮೂರ್ಛೆ ರೋಗ ಮುಂತಾದ ಲಕ್ಷಣಗಳು ಕಾಣಿಸಿಕೊಂಡಿದೆ. ಈ ಘಟನೆಗೆ ಕಲುಷಿತಗೊಂಡ ನೀರು ಸೇವನೆಯೇ ಕಾರಣ ಎಂದು ಹೇಳಲಾಗುತ್ತಿದ್ದರೂ, ಈ ಸಂಬಂಧ ನಿಖರ ಕಾರಣ ತಿಳಿದುಬಂದಿಲ್ಲ.
PublicNext
07/12/2020 11:28 am