ಶಿವಮೊಗ್ಗ: ಆಸ್ಪತ್ರೆಯಲ್ಲಿ ತಾಯಿಯೊಂದಿಗಿದ್ದ ಅಪ್ರಾಪ್ತೆ ಮೇಲಿನ ಗ್ಯಾಂಗ್ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಶಿವಮೊಗ್ಗ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮನೋಜ್ ಬಂಧಿತನಾಗಿದ್ದು, ಇನ್ನೋರ್ವ ಆರೋಪಿಯ ಹೆಸರನ್ನು ಪೊಲೀಸರು ಬಹಿರಂಗಪಡಿಸುತ್ತಿಲ್ಲ. ಅಪ್ರಾಪ್ತೆಯನ್ನು ಕಾರಿನಲ್ಲಿ ಕರೆದೊಯ್ದು ನಾಲ್ವರು ಅತ್ಯಾಚಾರ ಎಸಗಿದ್ದರು.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಮಹಿಳೆಯೊಬ್ಬರು ಕೊರೊನಾ ಸೋಂಕಿನಿಂದಾಗಿ ಮೆಗ್ಗಾನ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೈಕೆಗೆಂದು ಅವರ 16 ವರ್ಷದ ಮಗಳೂ ವಾರ್ಡ್ ಹೊರಗೆ ಇರುತ್ತಿದ್ದಳು. ಮೂರ್ನಾಲ್ಕು ದಿನಗಳಿಂದ ಆಕೆಗೆ ಊಟ, ತಿಂಡಿ ತಂದುಕೊಟ್ಟು ಆಸ್ಪತ್ರೆಯ ವಾರ್ಡ್ ಬಾಯ್ ಮನೋಜ್ ಎಂಬಾತ ಸ್ನೇಹ ಗಳಿಸಿದ್ದ. ಆದರೆ ಮನೋಜ್ ಶನಿವಾರ ರಾತ್ರಿ ಬಾಲಕಿಗೆ ಹೊರಗೆ ಕರೆದುಕೊಂಡು ಹೋಗಿ ಊಟ ಕೊಡಿಸುವುದಾಗಿ ಹೇಳಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಆತನ ಮೂವರು ಸ್ನೇಹಿತರೂ ನಿರಂತರವಾಗಿ ಅತ್ಯಾಚಾರ ಎಸಗಿದ್ದರು. ಬಳಿಕ ಆಕೆಯನ್ನು ಆಸ್ಪತ್ರೆಗೆ ತಂದು ಬಿಟ್ಟಿದ್ದರು.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗೆ ಬಲೆ ಬೀಸಿದ್ದಾರೆ.
PublicNext
07/12/2020 01:24 pm