ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಮುಂಬೈನಲ್ಲಿ ಮಾದಕವಸ್ತು ನಿಯಂತ್ರಣ ಸಂಸ್ಥೆ (ಎನ್‌ಸಿಬಿ) ಬಂಧಿಸಿದೆ.
ಬಂಧಿತನನ್ನು ರೆಗಹಲ್ ಮಹಕಲ್ ಎಂದು ಗುರುತಿಸಲಾಗಿದೆ. ಆರೋಪಿಯಿಂದ 2.5 ಕೋಟಿ ರೂ. ಮೌಲ್ಯದ 5 ಕೆ.ಜಿ ಮಲಾನಾ ಕ್ರೀಮ್ ವಶಪಡಿಸಿಕೊಳ್ಳಲಾಗಿದೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯಲ್ಲಿ ಈ ಆರೋಪಿಯ ಬಂಧನ ಪ್ರಮುಖವಾದುದಾಗಿದೆ ಎಂದು ಎನ್‌ಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
PublicNext
09/12/2020 02:33 pm