ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬರೋಬ್ಬರಿ 46 ಮೊಬೈಲ್ ಫೋನ್ ಕದ್ದ ಕಳ್ಳ ಅರೆಸ್ಟ್

ಮುಂಬೈ: ಒಂದೇ ಮೊಬೈಲ್ ಅಂಗಡಿಯಲ್ಲಿ ಬರೋಬ್ಬರಿ 7 ಲಕ್ಷ ಬೆಲೆಬಾಳುವ 46 ಮೊಬೈಲ್ ಫೋನ್‍ಗಳನ್ನು ಕದ್ದು ಪರಾರಿಯಾಗಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬಂಧಿತ ಆರೋಪಿಯನ್ನು ಅಜ್ಮತ್ ಅಲಿ ಶೇಖ್ (46) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯ ಕಿರಿಯ ಸಹೋದರ ಕೂಡ ಕಳ್ಳತನದಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದೆ. ಬಂಧಿತ ಆರೋಪಿ ಶೇಖ್‍ನಿಂದ 7 ಲಕ್ಷ ರೂಪಾಯಿ ಮೌಲ್ಯದ 46 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಂಬೈ ಸಮತಾ ನಗರದ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ತಿಂಗಳು ಸಮುತಾ ನಗರದ ಮೊಬೈಲ್ ಅಂಗಡಿಯೊಂದರಲ್ಲಿ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 46 ವರ್ಷದ ವ್ಯಕ್ತಿಯನ್ನು ಉತ್ತರ ಪ್ರದೇಶದ ಸಿದ್ದಾರ್ಥನಗರದಿಂದ ಬಂಧಿಸಲಾಗಿದೆ. ಆರೋಪಿಗಳಿಬ್ಬರು ಮೊಬೈಲ್ ಅಂಗಡಿಯೊಂದಕ್ಕೆ ನುಗ್ಗಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಗಳೊಂದಿಗೆ ಪರಾರಿಯಾಗಿದ್ದರು.

ಆ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿ ಆರೋಪಿಗಳನ್ನು ಗುರುತಿಸಿದೆವು. ನಲಸೋಪರಾದಲ್ಲಿರುವ ಆರೋಪಿಗಳ ನಿವಾಸದ ಮೇಲೆ ದಾಳಿ ನಡೆಸಿದ್ದೆವು. ಆದರೆ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಆಗ ಆರೋಪಿಗಳ ನೆರೆಹೊರೆಯವರನ್ನು ಪ್ರಶ್ನಿಸಿದಾಗ ಆರೋಪಿಗಳು ಉತ್ತರಪ್ರದೇಶದಲ್ಲಿರುವ ಅವರ ಊರಿಗೆ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿತ್ತು. ಹೀಗಾಗಿ ಉತ್ತರದೇಶದಲ್ಲಿರುವ ಅವರ ಮನೆಯ ಮೇಲೆ ದಾಳಿ ಮಾಡಿದಾಗ ಒಬ್ಬ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ಸ್ಥಳದಿಂದ 46 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಸಹೋದರ ಬಹುಶಃ ಉಳಿದ ಫೋನ್ ಗಳೊಂದಿಗೆ ನೇಪಾಳಕ್ಕೆ ಪರಾರಿಯಾಗಿದ್ದಾನೆ ಎಂದು ಸಮತಾ ನಗರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಗಳು ಹೈಫೈ ಮಟ್ಟದ ಮೊಬೈಲ್ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು. ಈ ಇಬ್ಬರು ಖದೀಮರ ವಿರುದ್ಧ ನಲಸೋಪರಾ ಸಕಿನಾಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮೊದಲು ಎಷ್ಟು ಅಂಗಡಿಗಳಲ್ಲಿ ಕಳ್ಳತನ ಮಾಡಿದ್ದಾರೆ ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.

Edited By : Nagaraj Tulugeri
PublicNext

PublicNext

11/12/2020 02:57 pm

Cinque Terre

74.32 K

Cinque Terre

1

ಸಂಬಂಧಿತ ಸುದ್ದಿ