ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಟಿ ಸಂಜನಾಗೆ ಜಾಮೀನು: ರಿಲ್ಯಾಕ್ಸ್ ಆದ ಗಲ್ರಾನಿ

ಬೆಂಗಳೂರು: ಡ್ರಗ್ಸ್ ಪ್ರಕರರಣಕ್ಕೆ ಸಂಬಂಧಿಸಿದಂತೆ ಕಳೆದ ಮೂರು ತಿಂಗಳಿಂದ ಜೈಲು ಪಾಲಾಗಿದ್ದ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್‌ ಶುಕ್ರವಾರ ಷರತ್ತುಬದ್ಧ ಜಾಮೀನು ನೀಡಿದೆ

'₹3 ಲಕ್ಷ ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಒದಗಿಸಬೇಕು,' ಎಂದು ಕೋರ್ಟ್‌ ತಿಳಿಸಿತು. ಮತ್ತು ತಿಂಗಳಲ್ಲಿ ಎರಡು ಬಾರಿ ಠಾಣೆಗೆ ಬಂದು ಹಾಜರಾಗಬೇಕು, ತನಿಖೆಗೆ ಸಹಕರಿಸಬೇಕು,' ಎಂದು ಷರತ್ತು ವಿಧಿಸಿದ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಸಂಜನಾ ಅವರ ಜಾಮೀನು ಅರ್ಜಿಯ ವಿಚಾರಣೆ ಗುರುವಾರವೂ ನಡೆದಿತ್ತು. ಶುಕ್ರವಾರಕ್ಕೆ ವಿಚಾರಣೆ ಮುಂದೂಡಲಾಗಿತ್ತು. ಅದರಂತೆ ಇಂದು ವಿಚಾರಣೆ ನಂತರ ಜಾಮೀನು ಮಂಜೂರು ಮಾಡಲಾಗಿದೆ.

Edited By : Nagaraj Tulugeri
PublicNext

PublicNext

11/12/2020 03:33 pm

Cinque Terre

80.93 K

Cinque Terre

5

ಸಂಬಂಧಿತ ಸುದ್ದಿ